ಸ್ಯಾಂಡಲ್ವುಡ್ ನಟ ಸುದೀಪ್ ಅಭಿಮಾನಿಗಳ ವಿರುದ್ಧ ವಂದೇಮಾತರಂ ಸಮಾಜಸೇವಾ ಸಂಸ್ಥೆಯ ರಾಜ್ಯಾಧ್ಯಕ್ಷ ಶಿವಕುಮಾರ್ ನಾಯ್ಡು ಸುದಿಪ್ ಅಭಿಮಾನಿಗಳಿಂದ ಬೆದರಿಕೆ ಬರುತ್ತಿರುವುದಾಗಿ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ಹೌದು, ಕೆಲ ದಿನಗಳ ಹಿಂದೆಯಷ್ಟೇ,ಶಿವಕುಮಾರ್ ನಾಯ್ಡು ಸುದೀಪ್ ವಿರುದ್ಧ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದರು. ಆನ್ಲೈನ್ ಜೂಜಾಟಕ್ಕೆ ಸಂಬಂಧಿಸಿದ ಜಾಹೀರಾತಿನಲ್ಲಿ ಸುದೀಪ್ ಕಾಣಿಸಿಕೊಂಡಿದ್ರು. ಇದರಿಂದ ಅವರನ್ನ ಅನುಸರಿಸುವ ಅಭಿಮಾನಿಗಳಿಗೆ ತಪ್ಪು ಸಂದೇಶ ರವಾನೆಯಾಗುತ್ತಿದೆ. ಹೀಗಾಗಿ ಸುದೀಪ್ ಜಾಹೀರಾತಿನಿಂದ ಹೊರಬರುವಂತೆ ಒತ್ತಾಯಿಸಿ ವಾಣಿಜ್ಯ ಮಂಡಳಿಗೆ ದೂರು ನೀಡಲಾಗಿತ್ತು. ಅಲ್ಲದೆ ಇಂತಹ ಜಾಹೀರಾತಿನಲ್ಲಿ ಮುಂದುವರೆದರೆ ಸುದೀಪ್ ಅವರನ್ನು ಚಿತ್ರರಂಗದಿಂದ ನಿಷೇಧಿಸುವಂತೆ ಮನವಿ ಮಾಡಿದ್ರು..

ಈ ದೂರಿನ ಬಳಿಕ ದೇಶ ವಿದೇಶಗಳ ಅಭಿಮಾನಿಗಳಿಂದ ಬೆದರಿಕೆ ಕರೆ, ವಾಟ್ಸ್ಯಾಪ್ ಸಂದೇಶಗಳು ಬರುತ್ತಿದ್ದು, ನನಗೆ ಜೀವ ಬೆದರಿಕೆ ಇದೆ ಎಂದು ಶಿವಕುಮಾರ್ ತಿಳಿಸಿದ್ದಾರೆ. ಅಲ್ಲದೆ ನನಗೆ ಏನೇ ಆದರೂ ಅದಕ್ಕೆ ಸುದೀಪ್ ಅವರು ನೇರ ಹೊಣೆಯಾಗುತ್ತಾರೆ. ಹೀಗಾಗಿ ತಮಗೆ ಬಂದಿರುವ ಕರೆಗಳು ಕಿಚ್ಚನ ಅಭಿಮಾನಿಗಳು, ಅಭಿಮಾನಿ ಸಂಘಗಳಾದ್ದಾಗಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.